ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು:ಜವಾನ
ಹುದ್ದೆಗಳ ಸಂಖ್ಯೆ:34
ವೇತನ ವಿವರ::INR 17000 to 28950 /Month

ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸದ ಕೊನೆ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಗರಿಷ್ಠ 35, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. –
ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
ಆಯ್ಕೆ ವಿಧಾನ ಹೇಗಿರುತ್ತದೆ?
ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು (1:10 ರ ಅನುಪಾತದಲ್ಲಿ) ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200. SC / ST / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.ಆನ್‌ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಮುಖವಾದ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ | 19-04-2021 |
ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 25-05-2021 |
ಪ್ರಮುಖವಾದ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |