ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಬೆಂಗಳೂರು ನೇಮಕಾತಿ ಅಧಿಸೂಚನೆ 2021

State Government

ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಭಾಷಾಂತರಕಾರರ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ(Karnataka High Court recruitment 2021) ಪ್ರಕಟಿಸಿದ್ದು, ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 03 ಉದ್ಯೋಗ ಸ್ಥಳ:ಕರ್ನಾಟಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿ ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಜೊತೆಗೆ ಸ್ನಾತಕೋತ್ತರ ಪದವಿಯಲ್ಲಿ ಆಂಗ್ಲಭಾಷೆಯನ್ನು ಅಭ್ಯಸಿಸಿರಬೇಕು.ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500/- ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕ ಇರುತ್ತದೆ. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ ವೇತನ: – ಭಾಷಾಂತರಕಾರರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 44,900/- ವೇತನ ಹಾಗೂ ಇತರೆ ಭತ್ಯೆಗಳನ್ನು ಪಡೆಯುವರು. ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Leave a Reply

Your email address will not be published. Required fields are marked *