Padma Awards 2022 complete list PDF In Kannada

National ರಾಷ್ಟೀಯ ಸುದ್ದಿಗಳು

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು ಕನ್ನಡಕವಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಹೆಲಿಕಾಪ್ಟರ್​ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ (Chief of Defence Staff – CDS) ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಬಭೂಷಣ ಪುರಸ್ಕಾರ ಸಂದಿದೆ. ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾದೆಳ್ಳ ಸೇರಿದಂತೆ 128 ಸಾಧಕರಿಗೆ ಪದ್ಮ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ಈ ವರ್ಷ ಒಂದು ಜೋಡಿಗೆ ಪ್ರಶಸ್ತಿ ಸೇರಿದಂತೆ 128 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ (ಒಂದು ಜೋಡಿಯನ್ನು ಒಂದು ಪ್ರಶಸ್ತಿ ಎಂದೇ ಗಣನೆಗೆ ತೆಗೆದುಕೊಳ್ಳಲಾಗುವುದು). ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ . ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯವು ಪ್ರಸಕ್ತ ಸಾಲಿನಲ್ಲಿ ಒಟ್ಟು 128 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ಪೈಕಿ ನಾಲ್ವರಿಗೆ ಪದ್ಮವಿಭೂಷಣ, 17 ಸಾಧಕರಿಗೆ ಪದ್ಮಭೂಷಣ, 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

1)ಪದ್ಮ ವಿಭೂಷಣ – 04

ಪದ್ಮವಿಭೂಷಣ(“ಕಮಲ ಅಲಂಕಾರ”) ಭಾರತ ರತ್ನದ ನಂತರ ಭಾರತ ಗಣರಾಜ್ಯದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ .2 ಜನವರಿ 1954 ರಂದು ಸ್ಥಾಪಿಸಲಾಯಿತು.

2)ಪದ್ಮಭೂಷಣ – 17

ಭಾರತದ ಗಣರಾಜ್ಯದಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ,ಮೊದಲು ಭಾರತ ರತ್ನ ಮತ್ತು ಪದ್ಮವಿಭೂಷಣ ಮತ್ತು ಪದ್ಮಶ್ರೀ ನಂತರ .2 ಜನವರಿ 1954 ರಂದು ಸ್ಥಾಪಿಸಲಾಯಿತು.

3)ಪದ್ಮಶ್ರೀ – 107

ಭಾರತರತ್ನ ,ಪದ್ಮವಿಭೂಷಣ ಮತ್ತು ಪದ್ಮಭೂಷಣ ನಂತರ ಭಾರತ ಗಣರಾಜ್ಯದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.2 ಜನವರಿ 1954 ರಂದು ಸ್ಥಾಪಿಸಲಾಯಿತು.

 2022ರ ಪದ್ಮ ಪ್ರಶಸ್ತಿಗಳು:

🍁ಪದ್ಮವಿಭೂಷಣ -04

🍁 ಪದ್ಮಭೂಷಣ – 17

🍁 ಪದ್ಮಶ್ರೀ – 107

👉 ಒಟ್ಟು – 128 ಪ್ರಶಸ್ತಿಗಳನ್ನು ನೀಡಲಾಗುತ್ತದೆ.🌸 ಪ್ರಶಸ್ತಿ ಪುರಸ್ಕೃತರಲ್ಲಿ  34 ಮಹಿಳೆಯರು,10 ವಿದೇಶಿಯರು &13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

 

 ಪದ್ಮಶ್ರೀ ಪುರಸ್ಕೃತ ಕರ್ನಾಟಕದ ಸಾಧಕರು :

🍀 ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್)

🍀 ಎಚ್ .ಆರ್.ಕೇಶವಮೂರ್ತಿ (ಕಲೆ)

🍀 ಅಬ್ದುಲ್ ಖಾದರ್ ನಾದಕಟ್ಟಿನ್ (ತಳಮಟ್ಟದ ಅನ್ವೇಷಕರು)

🍀 ಅಮೈ ಮಹಾಲಿಂಗ ನಾಯ್ಕ (ಕೃಷಿ)

🍀 ಸದ್ದಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ)2022ರ ಈ ಪಟ್ಟಿಯಲ್ಲಿ ರಾಜ್ಯದ ಒಟ್ಟು ಐವರು ಸ್ಥಾನ ಪಡೆದಿದ್ದು, ದಲಿತ ಕವಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪುರಸ್ಕಾರ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ದಿವಂಗತ ಸಿದ್ದಲಿಂಗಯ್ಯನವರು ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ ಅವರನ್ನು ಪದ್ಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಸಾಧಕ ಅಮೈ ಮಹಾಲಿಂಗ ನಾಯ್ಕ ಅವರನ್ನೂ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಅಣ್ಣೀಗೇರಿಯ ಅಬ್ದುಲ್ ಖಾದರ್ ನಡಕಟ್ಟೀನ್ ಅವರನ್ನು ಕೃಷಿ ಆವಿಷ್ಕಾರ ಕ್ಷೇತ್ರದಲ್ಲಿ ಗುರ್ತಿಸಿ ಪದ್ಮಶ್ರೀ ಪುರಸ್ಕಾರ ನೀಡಲಾಗಿದೆ. ಕಲಾ ರಂಗದಿಂದ ಎಚ್. ಆರ್. ಕೇಶವ ಮೂರ್ತಿ ಅವರನ್ನು ಪದ್ಮ ಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ವಿಜ್ಞಾನ ಹಾಗೂ ಎಂಜಿನಿಯರಿಂಗ್ ರಂಗಕ್ಕೆ ನೀಡಿದ ಅಮೋಘ ಕೊಡುಗೆಯನ್ನು ಸ್ಮರಿಸಿ ಸುಬ್ಬಣ್ಣ ಅಯ್ಯಪ್ಪನ್ ಅವರನ್ನೂ ಪದ್ಮ ಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಈ ಬಾರಿ ರಾಜ್ಯದ ಐವರು ಗಣ್ಯರು ಪದ್ಮ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.ಇತ್ತೀಚೆಗಷ್ಟೇ ಅಪಘಾತದಲ್ಲಿ ನಿಧನರಾದ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪುರಸ್ಕಾರ ನೀಡಲು ಕೇಂದ್ರ ತೀರ್ಮಾನಿಸಿದೆ. ರಾಜಕೀಯ ವ್ಯವಹಾರಗಳ ವಿಭಾಗದಲ್ಲಿ ಉತ್ತರ ಪ್ರದೇಶದ ಕಲ್ಯಾಣ್ ಸಿಂಗ್ ಮರಣೋತ್ತರವಾಗಿ ಪದ್ಮ ವಿಭೂಷಣ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಜಮ್ಮು ಕಾಶ್ಮೀರದ ರಾಜಕಾರಣಿ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಭೂಷಣ ನೀಡಲು ತೀರ್ಮಾನಿಸಲಾಗಿದೆ. ಈ ಬಾರಿಯ ವಿಶೇಷವೆಂದರೆ, ಅಮೆರಿಕ ನಿವಾಸಿಗಳಾದ ಮೈಕ್ರೋ ಸಾಫ್ಟ್‌ ಸಿಇಒ ಸತ್ಯ ನಾರಾಯಣ ನಡೆಲ್ಲಾ ಹಾಗೂ ಗೂಗಲ್‌ನ ಸುಂದರ್ ಪಿಚಯ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಹಿಂದಿ, ಕನ್ನಡ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ಹಿನ್ನೆಲೆ ಗಾಯಕರಾಗಿ ಗುರ್ತಿಸಿಕೊಂಡಿರುವ ಸೋನು ನಿಗಂ ಅವರಿಗೂ ಪದ್ಮ ಭೂಷಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ

DOWNLOAD COMPLETE PDF LIST

Leave a Reply

Your email address will not be published. Required fields are marked *