ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಡಿಸೆಂಬರ್ 4,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಡಿಸೆಂಬರ್ 31,2020ರ ಅನ್ವಯ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಏಪ್ರಿಲ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,620/- ರಿಂದ 42,020/-ರೂ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ:
ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡತಕ್ಕದ್ದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ನವೆಂಬರ್ 14,2020 ರಿಂದ ಡಿಸೆಂಬರ್ 4,2020
ಅರ್ಜಿ ಶುಲ್ಕ ಪಾವತಿಸುವ ದಿನಾಂಕ: ನವೆಂಬರ್ 14,2020 ರಿಂದ ಡಿಸೆಂಬರ್ 4,2020
ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ದಿನಾಂಕ: ಡಿಸೆಂಬರ್ ತಿಂಗಳ 3ನೇ ವಾರದ ನಂತರ
ಫೇಸ್-I: ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕ: ಡಿಸೆಂಬರ್ 31,2020 ಮತ್ತು ಜನವರಿ 2, 4, 5,2021ನೇ ತಾರೀಖಿನಂದು
ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ: ಜನವರಿ 2021ರ 3ನೇ ವಾರ
ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ದಿನಾಂಕ: ಜನವರಿ 2021ರ 3ನೇ ವಾರ
ಫೇಸ್ II: ಆನ್‌ಲೈನ್ ಪ್ರಮುಖ ಪರೀಕ್ಷೆ ದಿನಾಂಕ: ಜನವರಿ 29,2021
ಮುಖ್ಯ ಪರೀಕ್ಷೆಯ ಫಲಿತಾಂಶ ದಿನಾಂಕ: ಫೆಬ್ರವರಿ 2021ರ 3/4ನೇ ವಾರ
ಫೇಸ್ III: ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಫೆಬ್ರವರಿ 2021ರ 3/4ನೇ ವಾರ
ಫೇಸ್-III: ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ/ ಮಾರ್ಚ್ 2021